ಕುಂದಾಪುರದ ಹೆನ್ನಾಬೈಲಿನಲ್ಲಿ ನಡೆದ ಯಕ್ಷಗಾನ ಪ್ರದರ್ಶನವೊಂದರಲ್ಲಿ ಪ್ರೇಕ್ಷಕರು ಶಿಳ್ಳೆ ಹೊಡೆದಿದ್ದಕ್ಕೆ ಹಿರಿಯ ಕಲಾವಿದ ಉಜಿರೆ ಅಶೋಕ್ ಭಟ್ ವೇದಿಕೆಯಲ್ಲೇ ಆಕ್ರೋಶ ಹೊರಹಾಕಿ ಕ್ಲಾಸ್ ತೆಗೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಲಾವಿದರ ನಡೆ ಮತ್ತು ಮಾತಿನ ಬಗ್ಗೆ ಪರ-ವಿರೋಧ ಚರ್ಚೆಗಳು ತಾರಕಕ್ಕೇರಿವೆ. ಕಂಬಳ ಮತ್ತು ಕೋಳಿ ಅಂಕಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಜನರಿಂದ ಆಕ್ಷೇಪವೂ ವ್ಯಕ್ತವಾಗಿದೆ.